HomeKarnatakaಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ನ. 30ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸ್ಥಗಿತ

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ನ. 30ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸ್ಥಗಿತ

ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು.

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular