ಬಿಪಿಎಲ್ ಕಾರ್ಡ್ ಹೊಂದಿದ ಅರ್ಹರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ರದ್ದಾಗಿದ್ದರೆ 24 ಗಂಟೆಯಲ್ಲಿ ವಾಪಸ್

ಬೆಂಗಳೂರು: ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಒಂದು ವೇಳೆ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದಲ್ಲಿ 24 ಗಂಟೆಯೊಳಗೆ ವಾಪಸ್ ಬಿಪಿಎಲ್ ಕಾರ್ಡ್ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಆಹಾರದ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದೆ. ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

‘ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು ಎನ್ನುವ ಬಗ್ಗೆ ಮಾನದಂಡಗಳಿದ್ದು, ಅದನ್ನು ಆಧರಿಸಿ ಕಾರ್ಡ್ ಗಳ ಪರಿಶೀಲನೆ ನಡೆಯಲಿದೆ. ಬಡತನ ರೇಖೆಗಿಂತ ಕೆಳಗಿರುವ ಯಾವುದೇ ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಕೈತಪ್ಪುವುದಿಲ್ಲ’ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read