HomeKarnatakaಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಸೇರ್ಪಡೆ, ಬದಲಾವಣೆ ಬಗ್ಗೆ ಇಲ್ಲಿದೆ ಮಾಹಿತಿ

ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಸೇರ್ಪಡೆ, ಬದಲಾವಣೆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು.

ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ 1.53 ಕೋಟಿ ಮಂದಿ ಪಡಿತರ ಚೀಟಿ ಹೊಂದಿದ್ದಾರೆ. ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಪಡಿತರ ಚೀಟಿಯಲ್ಲಿ ಮಹಿಳೆ ಮುಖ್ಯಸ್ಥೆ ಆಗಿರಬೇಕು. 1.22 ಕೋಟಿ ಪಡಿತರ ಚೀಟಿಯಲ್ಲಿ ಮಾತ್ರ ಮಹಿಳಾ ಮುಖ್ಯಸ್ಥರು ಎಂದಿದ್ದು, ಇವರು ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಉಳಿದ ಪಡಿತರ ಚೀಟಿಗಳಲ್ಲಿ ಪುರುಷರು ಮುಖ್ಯಸ್ಥರಾಗಿರುವುದರಿಂದ ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ನಮೂದಿಸಲು ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮೀಪದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಮುಖ್ಯಸ್ಥರ ಹೆಸರು ಬದಲಾವಣೆ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಬಯೋಮೆಟ್ರಿಕ್ ದೃಢೀಕರಣ ಮೂಲಕ ದಾಖಲೆಗಳನ್ನು ದೃಢೀಕರಿಸಿ ಸೇವಾ ಕೇಂದ್ರದಲ್ಲಿ ಮಾಹಿತಿಯನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಸ್ವೀಕೃತಿ ಪಡೆಯಬೇಕು. ಆಹಾರ ಇಲಾಖೆ ಕಚೇರಿಯಿಂದ ಎಸ್ಎಂಎಸ್ ಬರಲಿದ್ದು, ಬಳಿಕ ಸ್ವೀಕೃತಿ ಪತ್ರ ನೀಡಿ ಮನೆಯ ಯಜಮಾನಿ ಹೆಸರು ಬದಲಿಸಿದ, ಸೇರ್ಪಡೆ ಮಾಡಿದ ಪಡಿತರ ಚೀಟಿ ಪಡೆಯಬಹುದು.

ಆನ್ಲೈನ್ ನಲ್ಲಿ ಪಡಿತರ ಚೀಟಿ ತಿದ್ದುಪಡಿಗಾಗಿ http://ahara.kar.nic.in/ ವೆಬ್ಸೈಟ್ ಗಮನಿಸಬಹುದು. ಇ- ಸೇವೆಗಳ ಮೇಲೆ ಕ್ಲಿಕ್ ಮಾಡಿ, ತಿದ್ದುಪಡಿ/ ಹೊಸ ಸೇರ್ಪಡೆ ಆಯ್ಕೆ ಕ್ಲಿಕ್ ಮಾಡಿ, ಜಿಲ್ಲೆ ಆಯ್ಕೆ ಮಾಡಿ, ಅಗತ್ಯ ಮಾಹಿತಿ ಭರ್ತಿ ಮಾಡಿ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿದ ನಂತರ ಫಾರ್ಮ್ ಸಬ್ಮಿಟ್ ಕೊಡಿ. ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ. ಈ ನಂಬರ್ ಮೂಲಕ ಅರ್ಜಿಯ ಸ್ಟೇಟಸ್ ಟ್ರ್ಯಾಕ್ ಮಾಡಬಹುದಾಗಿದೆ.

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಲು ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರ, ಪಡಿತರ ಚೀಟಿ, ಅರ್ಜಿದಾರರ ವಿಳಾಸದ ಪುರಾವೆಗೆ ಆಧಾರ್ ಕಾರ್ಡ್ ಅಥವಾ ಇತರೆ ದಾಖಲೆ, ಅರ್ಜಿದಾರರ ಆಧಾರ್ ಕಾರ್ಡ್ ಅಥವಾ ಇತರೆ ದಾಖಲೆ, ಹೊಸ ಕುಟುಂಬ ಸದಸ್ಯರ ಪಾಸ್ಪೋರ್ಟ್ ಅಳತೆಯ ಫೋಟೋ ಆಧಾರ್ ಕಾರ್ಡ್ ಬೇಕಾಗುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular