HomeKarnatakaಸುಳ್ಳು ಮಾಹಿತಿ ನೀಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದವರಿಗೆ ಶಾಕ್: 22 ಲಕ್ಷ ಅನರ್ಹ ಪಡಿತರ...

ಸುಳ್ಳು ಮಾಹಿತಿ ನೀಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದವರಿಗೆ ಶಾಕ್: 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದ್ದು, ಅನರ್ಹ ಪಡಿತರ ಚೀಟಿಗಳ ಪತ್ತೆ ಕುಟುಂಬ ತಂತ್ರಾಂಶದ ಮೊರೆ ಹೋಗಿದೆ.

ರಾಜ್ಯದಲ್ಲಿ 22,62,413 ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆ ಇ- ಆಡಳಿತ ಕೇಂದ್ರಕ್ಕೆ ಮನವಿ ಮಾಡಿದ್ದು, ಈ ತಂತ್ರಾಂಶದಿಂದ ದೊರೆತ ಮಾಹಿತಿಯ ಅನ್ವಯ 10,97,621 ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳು ಪತ್ತೆಯಾಗಿವೆ.

10,54,368 ಕಾರ್ಡುಗಳನ್ನು 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹೊಂದಿದ್ದಾರೆ. 1,06,152 ಕಾರ್ಡ್ ಗಳನ್ನು ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿದ್ದಾರೆ. 4272 ಪಡಿತರ ಚೀಟಿಗಳು ಕೆಜಿಐಡಿ ಹೆಚ್.ಆರ್.ಎಂ.ಎಸ್.ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ- ಆಡಳಿತ ಕೇಂದ್ರ ಪತ್ತೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹತ್ತು ದಿನಗಳ ಒಳಗೆ ಅನರ್ಹ ಪಡಿತರ ಚೀಟಿಗಳನ್ನು ಮುಕ್ತಾಯಗೊಳಿಸಬೇಕು ಎಂದು ಎಲ್ಲಾ ಜಂಟಿ ಮತ್ತು ಉಪ ನಿರ್ದೇಶಕರಿಗೆ ಆಹಾರ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು, ಕಾರ್ ಹೊಂದಿರುವುದು ಸೇರಿ 14 ಮಾನದಂಡಗಳನ್ನು ಮುಂದಿಟ್ಟುಕೊಂಡು ಅನರ್ಹರ ಬಿಪಿಎಲ್ ಕಾರ್ಡ್ ಳನ್ನು ರದ್ದುಪಡಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ಕ್ರಮಕೈಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular