BIG NEWS: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, 93 ಸಾವಿರಕ್ಕೂ ಅಧಿಕ ಅರ್ಜಿಗಳು ತಿರಸ್ಕೃತಗೊಂಡಿವೆ.

ಅನ್ನಭಾಗ್ಯ ಗೃಹಜೋತಿ ಯೋಜನೆಗಳ ಕಾರಣದಿಂದ ಹೊಸ ಪಡಿತರ ಚೀಟಿಗೆ ಮತ್ತು ತಿದ್ದುಪಡಿಗೆ ಒಂದು ತಿಂಗಳ ಅವಧಿಯಲ್ಲಿ 3.18 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹೊಸ ಕುಟುಂಬ ಸದಸ್ಯರ ಹೆಸರು ಸೇರ್ಪಡೆ ವಿಳಾಸ ಬದಲಾವಣೆ ಮೊದಲಾದವುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಂದರೆಯಾದ ಕಾರಣಕ್ಕೆ ದಿನಾಂಕ ವಿಸ್ತರಿಸಲಾಗಿತ್ತು. 3.18 ಲಕ್ಷ ಅರ್ಜಿಗಳು ತಿದ್ದುಪಡಿಗೆ ಬಂದಿದ್ದು, 1,47,646 ಅರ್ಜಿಗಳು ಪುರಸ್ಕೃತಗೊಂಡಿವೆ. 93,362 ಅರ್ಜಿಗಳು ತಿರಸ್ಕೃತಗೊಂಡಿವೆ.

https://ahara.kar.nic.in/status1/gsc _rc_status.aspx ಲಿಂಕ್ ಬಳಸಿಕೊಂಡು ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸ್ಥಿತಿ ತಿಳಿದುಕೊಳ್ಳಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read