HomeKarnatakaBIG NEWS: BPL ಕಾರ್ಡ್ ರದ್ದಾದ ಆತಂಕದಲ್ಲಿದ್ದವರಿಗೆ ಭರ್ಜರಿ ಸುದ್ದಿ: ಪಡಿತರ ಚೀಟಿ ವಾಪಸ್ ನೀಡಲು...

BIG NEWS: BPL ಕಾರ್ಡ್ ರದ್ದಾದ ಆತಂಕದಲ್ಲಿದ್ದವರಿಗೆ ಭರ್ಜರಿ ಸುದ್ದಿ: ಪಡಿತರ ಚೀಟಿ ವಾಪಸ್ ನೀಡಲು ಸಿಎಂ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತಾಗಿ ಸಿಎಂ ಸೂಚನೆ ನೀಡಿದ್ದು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದಲ್ಲಿ ವಾಪಸ್ ನೀಡಿ ಎಂದು ತಿಳಿಸಿದ್ದಾರೆ.

ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದ್ದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular