HomeKarnatakaಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರ ಗಮನಕ್ಕೆ: ಕೂಡಲೇ ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರ ಗಮನಕ್ಕೆ: ಕೂಡಲೇ ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇ -ಕೆವೈಸಿ’(ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.

ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇ-ಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ಆಗಸ್ಟ್ 31 ರೊಳಗೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ(ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಇ -ಕೆವೈಸಿ ಕಾರ್ಯ ಶೇ.98.65 ಮುಕ್ತಾಯಗೊಂಡಿದ್ದು, ಇ -ಕೆವೈಸಿ ಆಗದೇ ಇರುವವರ ಪಟ್ಟಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೆ ಪಟ್ಟಿಯನ್ನು ಪ್ರದರ್ಶಿಸಲಾಗಿದೆ. ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಮಾಡಿಸದ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲಾಗುವುದು ಎಂದು ತಿಳಿಸಿದೆ. ಇ -ಕೆವೈಸಿ ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿದೆ ಎಂದು ಪಡಿತರ ಚೀಟಿದಾರರ ಗಮನಕ್ಕೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular