ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿಗಳಲ್ಲಿನ ಪ್ರತಿಯೊಬ್ಬ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ(e-KYC) ಮಾಡಿಕೊಳ್ಳಬೇಕು. ಇ-ಕೆವೈಸಿ ಮಾಡಿಸದೆ ಇರುವ ಸದಸ್ಯರ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಸರ್ಕಾರಿ ದಾಖಲೆಗಳಲ್ಲಿ ಪರಿಗಣಿಸದೆ ಇರಬಹುದು. ಆದ್ದರಿಂದ ಯಾವುದೇ ತೊಂದರೆಯಾಗದಂತೆ ಇ-ಕೆವೈಸಿ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿ 5 ವರ್ಷ ಪೂರ್ಣಗೊಳಿಸಿದ ಪಡಿತರ ಚೀಟಿದಾರರ ಸದಸ್ಯರು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡುವದು. ಆಧಾರ್ ಸಂಖ್ಯೆ ಹಾಗೂ ಆಧಾರ್‍ಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಜೊತೆ ತೆಗೆದುಕೊಂಡು ಹೋಗುವದು. ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ (ಬೆರಳಚ್ಚು) ದೃಢೀಕರಣ ನೀಡುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬೇಕು.
ಕೊನೆಯ ದಿನಾಂಕದವರೆಗೂ ಕಾಯದೆ ಶೀಘ್ರವಾಗಿ ಇ-ಕೆವೈಸಿ ದೃಢೀಕರಣವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

