HomeKarnatakaBIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ ; ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸರ್ಕಾರ...

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ ; ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸರ್ಕಾರ ಆದೇಶ

ಎಲ್ಲಾ ಪಡಿತರ ಚೀಟಿಗಳಲ್ಲಿರುವ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಹೌದು. ರಾಜ್ಯದ ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಸೂಚನೆ ನೀಡಿದ್ದು, ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಸಿಕೊಳ್ಳಬೇಕು ಎಂದು ತಿಳಿಸಿದೆ. ಇ-ಕೆವೈಸಿ ಪೂರ್ಣಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಿ ದಾಖಲೆಗಳಲ್ಲಿ ಸದಸ್ಯರ ಮಾಹಿತಿಯನ್ನು ಪರಿಗಣಿಸುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ, ಕೊನೆಯ ದಿನಾಂಕದವರೆಗೆ ಕಾಯದೆ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

 ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಿ ದಾಖಲೆಗಳಲ್ಲಿ ಸದಸ್ಯರ ಮಾಹಿತಿಯನ್ನು ಪರಿಗಣಿಸುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಸಮಸ್ಯೆ ಎದುರಾಗದಂತೆ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಕೆವೈಸಿ ಮಾಡಿಸಿಕೊಳ್ಳುವುದು ಹೇಗೆ?

  • ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ (Fair Price Shop) ಭೇಟಿ ನೀಡಬೇಕು.

  • ಆಧಾರ್ ಸಂಖ್ಯೆ ಹಾಗೂ ಆಧಾರ್‌ಗೆ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು.

  • ಬಯೋಮೆಟ್ರಿಕ್ (ಬೆರಳಚ್ಚು) ದೃಢೀಕರಣದ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬೇಕು.

  • ಇ-ಕೆವೈಸಿ ಯಶಸ್ವಿಯಾಗಿ ಪೂರ್ಣಗೊಂಡ ಬಳಿಕ ಅದರ ದೃಢೀಕರಣವನ್ನು ಪಡೆದುಕೊಳ್ಳಬೇಕು.

ಕೊನೆಯ ದಿನಾಂಕದವರೆಗೆ ಕಾಯದೆ, ಶೀಘ್ರವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular