HomeKarnatakaRation Card : ಇಂದಿನಿಂದ ಈ ಜಿಲ್ಲೆಗಳಲ್ಲಿ `ಪಡಿತರ ಚೀಟಿಯಲ್ಲಿ’ ಹೆಸರು ಸೇರ್ಪಡೆತಿದ್ದುಪಡಿಗೆ ಅವಕಾಶ

Ration Card : ಇಂದಿನಿಂದ ಈ ಜಿಲ್ಲೆಗಳಲ್ಲಿ `ಪಡಿತರ ಚೀಟಿಯಲ್ಲಿ’ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.

ಸೆಪ್ಟೆಂಬರ್ 12ರಿಂದ 14ರವರೆಗೆ ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಸೆ.12ರಿಂದ 14ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular