HomeKarnatakaRation Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

Ration Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ.

ರಾಜ್ಯ ಸರ್ಕಾರವು ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್‌ 1 ರಿಂದ 14ರ ವರೆಗೆ ಅವಕಾಶ ನೀಡಿತ್ತು.  ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಕೊಂಡಿದ್ದು, ಹಲವು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರ ಕಾರ್ಡುಗಳ ವಿಲೇವಾರಿ ಆದ ನಂತರದಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular