ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ದಶಮಾನೋತ್ಸವ ಹಿನ್ನಲೆ ಫೆ. 28 ರೊಳಗೆ ಪಡಿತರ ವಿತರಣೆಗೆ ಸೂಚನೆ

ಫೆ.29 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸುವರ್ಣ ಮಹೋತ್ಸವ ಮತ್ತು ಪಡಿತರ ವಿತರಕರ ರಾಜ್ಯ ಮಟ್ಟದ ಸಮಾವೇಶ ಕಾರ್ಯಕ್ರಮಗಳು ನಡೆಯಲಿವೆ.

ಈ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರಿಗೆ ಫೆಬ್ರವರಿ-2024 ರ ಮಾಹೆಯ ಪಡಿತರ ವಿತರಣೆಯನ್ನು ಫೆ.28 ರೊಳಗೆ ಪೂರ್ಣಗೊಳಿಸಬೇಕು.

ಫೆ.29 ರಂದು ಬಹುತೇಕ ನ್ಯಾಯಬೆಲೆ ಅಂಗಡಿಗಳ ಮಾಲಿಕರು ಹಾಗೂ ಪಡಿತರ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸುವ ಕಾರಣ, ಈ ತಿಂಗಳ ಕೊನೆಯ ದಿನಾಂಕದವರೆಗೆ ಕಾಯದೇ ಈವರೆಗೆ ಪಡಿತರ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಪಾಲಿನ ಪಡಿತರವನ್ನು ಪಡೆಯಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read