HomeKarnatakaಪಡಿತರ ಚೀಟಿದಾರರೇ ಗಮನಿಸಿ : ಇಂದಿನಿಂದ `ಬಿಪಿಎಲ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಪಡಿತರ ಚೀಟಿದಾರರೇ ಗಮನಿಸಿ : ಇಂದಿನಿಂದ `ಬಿಪಿಎಲ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಮತ್ತೆ ಬಿಪಿಎಲ್ ಕಾರ್ಡ್ (BPL CARD) ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದೆ.

ಅಕ್ಟೋಬರ್ 5 ರ ಇಂದಿನಿಂದ ಅಕ್ಟೋಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2 ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಕಾವೇರಿ, ಕೊಡಗು , ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular