HomeKarnatakaಪಡಿತರ ಚೀಟಿದಾರರೇ ಗಮನಿಸಿ : ಇಂದು ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಪಡಿತರ ಚೀಟಿದಾರರೇ ಗಮನಿಸಿ : ಇಂದು ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.

ಸೆ. 6ರ ಇಂದಿನಿಂದ ಸೆ.8ರವರೆಗೆ ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಪಡಿತರ ಚೀಟಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆ.9ರಿಂದ ಸೆ.11ರವರೆಗೆ ಕೇವಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿನ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸೆಪ್ಟೆಂಬರ್ 12ರಿಂದ 14ರವರೆಗೆ ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular