HomeKarnatakaಪಡಿತರ ಚೀಟಿದಾರರೇ ಗಮನಿಸಿ : ಈ ಜಿಲ್ಲೆಗಳಲ್ಲಿ `BPL, APL’ ಕಾರ್ಡ್ ಹೆಸರು ಸೇರ್ಪಡೆಗೆ ಇಂದು...

ಪಡಿತರ ಚೀಟಿದಾರರೇ ಗಮನಿಸಿ : ಈ ಜಿಲ್ಲೆಗಳಲ್ಲಿ `BPL, APL’ ಕಾರ್ಡ್ ಹೆಸರು ಸೇರ್ಪಡೆಗೆ ಇಂದು ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಅ.16 ರಿಂದ ಅ. 21 ರವರೆಗೆ ಅವಧಿ ವಿಸ್ತರಣೆ ಮಾಡಿದೆ. 

ಆಹಾರ ಇಲಾಖೆಯ ಆದೇಶದಂತೆ ಇಂದು ಹಲವು ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಕೊನೆಯ ದಿನವಾಗಿದ್ದು, ಪಡಿತರ ಚೀಟಿದಾರರು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಕೊನೆಯ ಅವಕಾಶ

ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ

ನಾಳೆಯಿಂದ ಅಕ್ಟೋಬರ್ 21 ರವರೆಗೆ ಈ ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ

For Latest News Updates, Join Our Whatsapp Community🚩
RELATED ARTICLES

Most Popular