HomeKarnatakaಪಡಿತರ ಚೀಟಿದಾರರೇ ಗಮನಿಸಿ : ಡಿಸೆಂಬರ್ ತಿಂಗಳ ʻಅನ್ನಭಾಗ್ಯʼ ರೇಷನ್, ಅಕ್ಕಿ ಹಣ ಖಾತೆಗೆ ಜಮಾ

ಪಡಿತರ ಚೀಟಿದಾರರೇ ಗಮನಿಸಿ : ಡಿಸೆಂಬರ್ ತಿಂಗಳ ʻಅನ್ನಭಾಗ್ಯʼ ರೇಷನ್, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಿದಾರರ ಖಾತೆಗೆ ನೇರ ನಗದು ವರ್ಗಾವಣೆ ಸಂಬಂಧಿಸಿದಂತೆ, ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಹಾಗೂ ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular