HomeLatest Newsಪಡಿತರ ಚೀಟಿದಾರರೇ ಗಮನಿಸಿ: ಏ.30 ರೊಳಗೆ ಇ-ಕೆವೈಸಿ ಮಾಡಿಸದಿದ್ರೆ ಆಹಾರಧಾನ್ಯ ಸ್ಥಗಿತ

ಪಡಿತರ ಚೀಟಿದಾರರೇ ಗಮನಿಸಿ: ಏ.30 ರೊಳಗೆ ಇ-ಕೆವೈಸಿ ಮಾಡಿಸದಿದ್ರೆ ಆಹಾರಧಾನ್ಯ ಸ್ಥಗಿತ

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ(ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪಡಿತರ ಚೀಟಿದಾರರು ಆಧಾರ್ ದೃಢೀಕರಣ(ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ(ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.

ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ(ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ  ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಬಳ್ಳಾರಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular