HomeKarnatakaGOOD NEWS: 1 ವಾರದಲ್ಲಿ ಬಿಪಿಎಲ್ ಕಾರ್ಡ್ ಸಮಸ್ಯೆ ಇತ್ಯರ್ಥ: ಹಳೆ ಕಾರ್ಡ್ ಗೆ ಪಡಿತರ...

GOOD NEWS: 1 ವಾರದಲ್ಲಿ ಬಿಪಿಎಲ್ ಕಾರ್ಡ್ ಸಮಸ್ಯೆ ಇತ್ಯರ್ಥ: ಹಳೆ ಕಾರ್ಡ್ ಗೆ ಪಡಿತರ ಪಡೆಯಲು ಅವಕಾಶ

ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ ಕಾರ್ಡ್‌ ಹಾಗೂ ನಂಬರ್‌ ಬಳಸಿ ಹಿಂದಿನಂತೆಯೇ ಆಹಾರ ಧಾನ್ಯ ಪಡೆಯಲೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಗೆ ಮುಂದಾಗಿದ್ದ ಸರ್ಕಾರ ಪರಿಷ್ಕರಣೆ ಕಾರ್ಯವನ್ನು ಕೈ ಬಿಟ್ಟು ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿದೆ. ರದ್ದಾಗಿದ್ದರೂ ಹಳೆಯ ಬಿಪಿಎಲ್ ಕಾರ್ಡ್ ತೋರಿಸಿ ಪಡಿತರ ಪಡೆಯಲು ಅವಕಾಶ ನೀಡಲಾಗಿದೆ. 4036 ಸರ್ಕಾರಿ ನೌಕರರು, ತೆರಿಗೆ ಪಾವತಿಸುವ 94,473 ಮಂದಿ ಸೇರಿ 1.02 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಹೊರಗಿಟ್ಟು ಯಥಾಸ್ಥಿತಿ ಮುಂದುವರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular