HomeKarnatakaಪಡಿತರ ಚೀಟಿದಾರರಿಗೆ ಸಚಿವ ಮುನಿಯಪ್ಪ ಗುಡ್ ನ್ಯೂಸ್: ಸರಿಯಾದ ಸರ್ವರ್ ಸಮಸ್ಯೆ, ಫಲಾನುಭವಿಗಳ ಖಾತೆಗೆ ಹಣ...

ಪಡಿತರ ಚೀಟಿದಾರರಿಗೆ ಸಚಿವ ಮುನಿಯಪ್ಪ ಗುಡ್ ನ್ಯೂಸ್: ಸರಿಯಾದ ಸರ್ವರ್ ಸಮಸ್ಯೆ, ಫಲಾನುಭವಿಗಳ ಖಾತೆಗೆ ಹಣ ಜಮಾ

ಕೋಲಾರ: ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿದ್ದು, ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಂಪನ್ಮೂಲ ಕೊರತೆ ಇಲ್ಲ. ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿತ್ತು ಎಂದು ತಿಳಿಸಿದ್ದಾರೆ.

ಇದೀಗ ಸರ್ವರ್ ಸಮಸ್ಯೆ ಬಗೆಹರಿದಿದ್ದು, ಶೀಘ್ರವೇ ಹಣ ಪಾವತಿಸಲಾಗುವುದು. ಪ್ರತಿ ತಿಂಗಳು 10ರಂದು ಖಾತೆಗೆ ಹಣ ಜಮಾ ಮಾಡಲಾಗುತ್ತಿತ್ತು. ಈ ಬಾರಿ ತಡವಾಗಿದೆ. ಬಿಪಿಎಲ್ ಕಾರ್ಡ್ ಪರಿಶೀಲನೆ ಕಾರ್ಯ ಮುಂದುವರಿದಿದ್ದು, ಬಿಪಿಎಲ್ ಗೆ ಅರ್ಹತೆ ಇಲ್ಲದ ಕಾರ್ಡ್ ಗಳನ್ನು ಎಪಿಎಲ್ ಆಗಿ ಪರಿವರ್ತಿಸಲಾಗುವುದು. ಪ್ರತಿ ಕೆಜಿ ಅಕ್ಕಿಗೆ 15 ರೂ. ಸಬ್ಸಿಡಿ ದರದಲ್ಲಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular