HomeKarnatakaಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ....

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14ರ ವರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 6 ರಿಂದ 8 ರವರೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕಲಬುರಗಿ, ರಾಮನಗರ, ರಾಯಚೂರು, ಯಾದಗಿರಿ, ವಿಜಯನಗರ, ತುಮಕೂರು, ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸೆಪ್ಟೆಂಬರ್ 9 ರಿಂದ 11 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಫಲಾನಿಭವಿಗಳಿಗೆ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಕಾಶ ಇದೆ.

ಸೆಪ್ಟಂಬರ್ 12ರ ರಿಂದ 14ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬಾಗಲಕೋಟೆ, ಚಾಮರಾಜನಗರ, ಬೆಳಗಾವಿ, ಕೊಡಗು, ಹಾವೇರಿ, ಹಾಸನ, ಗದಗ, ಮೈಸೂರು, ಮಂಡ್ಯ, ಉತ್ತರ ಕನ್ನಡ, ಉಡುಪಿ, ವಿಜಯಪುರ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular