HomeKarnatakaಪಡಿತರ ಚೀಟಿದಾರರಿಗೆ ಬಿಗ್ ಶಾಕ್: ತಿದ್ದುಪಡಿಗೆ ಅವಕಾಶ ಇದ್ರೂ ಅರ್ಜಿ ಸಲ್ಲಿಸಲು 'ಸರ್ವರ್ ಸಮಸ್ಯೆ'

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ತಿದ್ದುಪಡಿಗೆ ಅವಕಾಶ ಇದ್ರೂ ಅರ್ಜಿ ಸಲ್ಲಿಸಲು ‘ಸರ್ವರ್ ಸಮಸ್ಯೆ’

ಪಡಿತರ ಚೀಟಿದಾರರಿಗೆ ತಿದ್ದುಪಡಿಗೆ ಅವಕಾಶ ನೀಡಿದ್ದರೂ ಅರ್ಜಿ ಸಲ್ಲಿಸಲು ಜನರು ಪರದಾಟ ನಡೆಸುವಂತಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ, ಹೆಸರು ಸೇರ್ಪಡೆ ಮಾಡಲು ಸಾಧ್ಯವಾಗುತ್ತಿಲ್ಲ.

ದಿನವಿಡೀ ಕಾದರೂ ಅರ್ಜಿ ಸಲ್ಲಿಸಲು ಆಗುತ್ತಿಲ್ಲ. ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯಿಂದ ಜನ ಕಾಯುವಂತಾಗಿದೆ. ಭಾನುವಾರದಿಂದ ಮೂರು ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬೆಳಗಾವಿ, ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಟ್ಟಿರುವ ಮೂರು ದಿನದಲ್ಲಿ ಎರಡು ದಿನ ಸರ್ವರ್ ಸಮಸ್ಯೆಯಲ್ಲೇ ಕಳೆದು ಹೋಗಿದ್ದು, ಇನ್ನೊಂದು ದಿನದಲ್ಲಿ ಅರ್ಜಿ ಸಲ್ಲಿಸುವುದು ಅಸಾಧ್ಯವೆನ್ನಲಾಗಿದೆ. ಸರ್ವರ್ ಒತ್ತಡ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ತಿದ್ದುಪಡಿ ಅರ್ಜಿ ಸಲ್ಲಿಕೆಗೆ ವಿಭಾಗವಾರು ಜಿಲ್ಲೆಗಳಿಗೆ ಪ್ರತ್ಯೇಕ ದಿನಗಳನ್ನು ನಿಗದಿಪಡಿಸಿದೆ. ಅಕ್ಟೋಬರ್ 8 ರಿಂದ 10ರವರೆಗೆ ಬೆಳಗಾವಿ, ಮೈಸೂರು ವಿಭಾಗದ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದ್ದರೂ ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಕೆ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ದಿನಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ. ಪಡಿತರ ಚೀಟಿ ತಿದ್ದುಪಡಿಗೆ ನೀಡಿರುವ ಅವಧಿಯನ್ನು ವಿಸ್ತರಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular