BIG NEWS: ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ; ಸಿಎಂ ಘೋಷಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದು, ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಿಸುವುದಾಗಿ ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಸಿವು ಮುಕ್ತ ನಾಡು, ಹಸಿವು ಮುಕ್ತ ದೇಶ ನಿರ್ಮಾಣ ಕಾಂಗ್ರೆಸ್ ಸರ್ಕಾರದ ಗುರಿ ಎಂದರು.

2013ರ ಬಸವ ಜಯಂತಿ ದಿನದಂದೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣವೇ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆ. ಬಸವಣ್ಣನವರ ಕಾಯಕ-ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆ. ನಮ್ಮ ಯೋಜನೆಗಳಲ್ಲಿ ರಾಜಕೀಯ ಲಾಭದ ಉದ್ದೇಶ ಇಲ್ಲ. ರಾಜ್ಯದ ಯಾವುದೇ ಮನೆಯಲ್ಲಿ ಹಸಿವು, ಅನಾರೋಗ್ಯ, ಅನಕ್ಷರತೆ ಮತ್ತು ನಿರುದ್ಯೋಗದಿಂದ ಬಳಲುವರು ಇರದಂತೆ ನೋಡಿಕೊಳ್ಳುವುದೇ ನಮ್ಮ ಆಶಯ ಮತ್ತು ಬದ್ಧತೆ ಎಂದು ಹೇಳಿದರು.

ಇದೇ ವೇಳೆ ಪಡಿತರ ವಿತರಕರ ಕಮಿಷನ್ ಹೆಚ್ಚಳ ಮಾಡಲಾಗುವುದು. ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read