HomeKarnatakaಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಹಾರ ಧಾನ್ಯ ಹಂಚಿಕೆ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ. ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡ್‍ಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ. ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2 ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ. ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್. ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ. ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿ ಯೋಜನೆಯಡಿ ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಮತ್ತು ಅಂತ್ಯೋದಯ ಪಡಿತರ ಚೀಟಿಯ 3 ಕ್ಕಿಂತ ಹೆಚ್ಚಿನ ಪ್ರತಿ ಸದಸ್ಯರಿಗೆ ರಾಜ್ಯ ಸರ್ಕಾರದ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಬದಲು ವ್ಯಕ್ತಿಗೆ ತಲಾ 170 ನಂತೆ ಲಿಂಕ್ ಆಗಿರುವ ಬ್ಯಾಕ್ ಖಾತೆಗಳಿಗೆ ನೇರವಾಗಿ ಡಿ.ಬಿ.ಟಿ. ಮೂಲಕ ಹಣ ಜಮೆ ಮಾಡಲಾಗುತ್ತಿದೆ. ಈ ಕುರಿತು ತಾಂತ್ರಿಕ ದೋಷಗಳಿದ್ದಲ್ಲಿ ಬ್ಯಾಂಕ್ ಶಾಖೆಗಳಿಗೆ ಅಥವಾ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಜಿಲ್ಲಾ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular