HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಹಣ; ಉಚಿತ ಅಕ್ಕಿ, ರಾಗಿ ಸೇರಿ ಪಡಿತರ ಧಾನ್ಯ...

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಹಣ; ಉಚಿತ ಅಕ್ಕಿ, ರಾಗಿ ಸೇರಿ ಪಡಿತರ ಧಾನ್ಯ ಹಂಚಿಕೆ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆಜಿ ಅಕ್ಕಿ ಮತ್ತು 14 ಕೆಜಿ ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆಜಿ ಗೆ 15 ರೂ.ನಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular