HomeKarnatakaಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ, ರಾಗಿ ವಿತರಣೆ; ಖಾತೆಗೆ ಹಣ

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ, ರಾಗಿ ವಿತರಣೆ; ಖಾತೆಗೆ ಹಣ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ನವೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಪ್ರತಿ ಕೆಜಿಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ಥ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular