ಮೈಸೂರು: ಮೈಸೂರಿನಲ್ಲಿ ಪಡಿತರ ಅಕ್ಕಿ ಮಾರಾಟ ದಂಧೆ ಮುಂದುವರೆದಿದೆ. ಆಟೋಗಳಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುವಾಗ ಸಾರ್ವಜನಿಕರು ಹಿಡಿದಿದ್ದಾರೆ.
ಮೈಸೂರಿನ ಯರಗನಹಳ್ಳಿಯಲ್ಲಿ ಮನೆಗಳಿಂದ ಪಡಿತರ ಅಕ್ಕಿ ಖರೀದಿಸಿ ಸಾಗಿಸಲಾಗುತ್ತಿತ್ತು. ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಅಕ್ಕಿ ಖರೀದಿಸಿ ಸಾಗಿಸುತ್ತಿದ್ದರು. ಆಟೋಗಳಲ್ಲಿ ಅಕ್ಕಿ ಸಾಗಿಸುತ್ತಿದ್ದಾಗ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರು ಅಪ್ರಾಪ್ತರು ಪರಾರಿಯಾಗಿದ್ದಾರೆ. ಅಕ್ಕಿ ಸಾಗಿಸುತ್ತಿದ್ದ ಎರಡು ಆಟೋ, 501 ಕೆಜಿ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.