HomeLatest Newsರಾಜ್ಯದಲ್ಲಿ ಮುಂದುವರೆದ ಪಡಿತರ ಅಕ್ಕಿ ಮಾರಾಟ ದಂಧೆ: ಇಬ್ಬರು ವಶಕ್ಕೆ

ರಾಜ್ಯದಲ್ಲಿ ಮುಂದುವರೆದ ಪಡಿತರ ಅಕ್ಕಿ ಮಾರಾಟ ದಂಧೆ: ಇಬ್ಬರು ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಪಡಿತರ ಅಕ್ಕಿ ಮಾರಾಟ ದಂಧೆ ಮುಂದುವರೆದಿದೆ. ಆಟೋಗಳಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುವಾಗ ಸಾರ್ವಜನಿಕರು ಹಿಡಿದಿದ್ದಾರೆ.

ಮೈಸೂರಿನ ಯರಗನಹಳ್ಳಿಯಲ್ಲಿ ಮನೆಗಳಿಂದ ಪಡಿತರ ಅಕ್ಕಿ ಖರೀದಿಸಿ ಸಾಗಿಸಲಾಗುತ್ತಿತ್ತು. ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಅಕ್ಕಿ ಖರೀದಿಸಿ ಸಾಗಿಸುತ್ತಿದ್ದರು. ಆಟೋಗಳಲ್ಲಿ ಅಕ್ಕಿ ಸಾಗಿಸುತ್ತಿದ್ದಾಗ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರು ಅಪ್ರಾಪ್ತರು ಪರಾರಿಯಾಗಿದ್ದಾರೆ. ಅಕ್ಕಿ ಸಾಗಿಸುತ್ತಿದ್ದ ಎರಡು ಆಟೋ, 501 ಕೆಜಿ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular