HomeKarnatakaನಾಮಪತ್ರ ಪರಿಶೀಲನೆ ಹೊತ್ತಲ್ಲೇ ಬಿಜೆಪಿ ಅಭ್ಯರ್ಥಿಗೆ ಬಿಗ್ ಶಾಕ್: ಕಾಂಗ್ರೆಸ್, ಆಪ್ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಕೆ

ನಾಮಪತ್ರ ಪರಿಶೀಲನೆ ಹೊತ್ತಲ್ಲೇ ಬಿಜೆಪಿ ಅಭ್ಯರ್ಥಿಗೆ ಬಿಗ್ ಶಾಕ್: ಕಾಂಗ್ರೆಸ್, ಆಪ್ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಕೆ

ಬೆಳಗಾವಿ: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರಕ್ಕೆ ಕಾಂಗ್ರೆಸ್ ಮತ್ತು ಆಪ್ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ.

ರತ್ನಾ ಮಾಮನಿ ನಾಮಪತ್ರ ಸಿಂಧುತ್ವ ವಿಚಾರಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಅಫಿಡವಿಟ್ ಅಪ್ಲೋಡ್ ಮಾಡಲು ಅವಕಾಶ ಇದೆ. ನಾಮಪತ್ರ ಪರಿಶೀಲನೆಗೆ ಮೊದಲು ಅಪ್ಲೋಡ್ ಮಾಡಲು ಅವಕಾಶ ಇದೆ ಎಂದು ಸವದತ್ತಿ ಚುನಾವಣಾಧಿಕಾರಿ ಡಾ. ರಾಜೀವ ಕೂಲೇರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದಲ್ಲಿ 16 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಪರಿಶೀಲನೆ ವೇಳೆ ಎರಡು ಆಕ್ಷೇಪಣೆಗಳು ಬಂದಿದ್ದವು. ಆಕ್ಷೇಪಣೆಗಳ ವಿಚಾರಣೆಗೆ ನಾಮಪತ್ರ ಪರಿಶೀಲನೆ ಮುಂದೂಡಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ನಡೆಸುತ್ತೇವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ರತ್ನ ಮಾಮನಿ ನಾಮಪತ್ರಕ್ಕೆ ಆಕ್ಷೇಪಣೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಾಪು ಗೌಡ ಆಕ್ಷೇಪಣೆ ಸಲ್ಲಿಸಿದ್ದಾರೆ. ಅಫಿಡವಿಟ್ ನಿಯಮ ಬದ್ಧವಾಗಿ ಇಲ್ಲ ಎಂದು ಆಕ್ಷೇಪಣೆ ಮಾಡಿದ್ದಾರೆ. ನಾಳೆ ಪರಿಶೀಲನೆ ನಡೆಸುತ್ತೇವೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular