ಬೆಂಗಳೂರು: ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪ್ರಕರಣ ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗರತ್ನಾ, ರವಿಕುಮಾರ್ ಒಂದು ಹೆಣ್ಣಿಗೆ ಗೌರವವನ್ನು ಕೊಟ್ಟಿಲ್ಲ. ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರವಿ ಕುಮಾರ್ ಅವರಿಗೆ ತಾಯಿ, ತಂಗಿ, ಅಕ್ಕ ಇಲ್ವಾ? ಅವರೆಲ್ಲರೂ ಒಂದು ಹೆಣ್ಣು ತಾನೆ? ರವಿಕುಮಾರ್ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ.