HomeIndiaBREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ...

BREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ ಘೋಷಣೆ

ನವದೆಹಲಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಈಗ ರವೀಂದ್ರ ಜಡೇಜಾ ಕೂಡ ಟಿ20 ಗೆ ನಿವೃತ್ತಿ ಘೋಷಿಸಿದ್ದಾರೆ.

2024ರ ಟಿ20 ವಿಶ್ವಕಪ್‌ ಗೆದ್ದ ಬಳಿಕ ಭಾರತದ ಮತ್ತೋರ್ವ ಕ್ರಿಕೆಟಿಗ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು Instagram ಪೋಸ್ಟ್‌ ನಲ್ಲಿ 4 ಸಾಲಿನ ಸಂದೇಶವನ್ನು ಬರೆದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ನಾನು ಕೃತಜ್ಞತೆಯ ಹೃದಯದಿಂದ T20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ದೃಢವಾದ ಕುದುರೆಯು ಹೆಮ್ಮೆಯಿಂದ ಓಡುತ್ತಿರುವಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿಯೂ ಅದನ್ನು ಮುಂದುವರಿಸುತ್ತೇನೆ. ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಯಿತು, ಇದು ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಶಿಖರವಾಗಿದೆ. ನೆನಪುಗಳು, ಉತ್ಸಾಹ ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

74 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಜಡೇಜ 515 ರನ್ ಗಳಿಸಿದ್ದು, 54 ವಿಕೆಟ್ ಪಡೆದಿದ್ದಾರೆ.

https://www.instagram.com/p/C81oDZyOUV1/?utm_source=ig_web_copy_link&igsh=MzRlODBiNWFlZA==

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular