HomeKarnatakaಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ರಾಯಚೂರು: ಮುದಗಲ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಳಿ ಘಟನೆ ನಡೆದಿದೆ.

ತಾಯಿ ಭಾರತಿ(29) ಮತ್ತು ಮಗ ಉದಯ ಸಿಂಗ್(11) ಮೃತಪಟ್ಟವರು ಎಂದು ಹೇಳಲಾಗಿದೆ. ಇವರು ಲಿಂಗಸುಗೂರು ತಾಲೂಕಿನ ಯರದೊಡ್ಡಿ ತಾಂಡಾ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular