BREAKING : ರಾಯಚೂರಿನಲ್ಲಿ ಕಾಡುಪ್ರಾಣಿ ಬೇಟೆಯಾಡಿ ನೃತ್ಯ ಮಾಡಿದ ಕಾಂಗ್ರೆಸ್ ಶಾಸಕನ ಪುತ್ರ & ಸಹೋದರ : ವಿಡಿಯೋ ವೈರಲ್.!

ರಾಯಚೂರು : ಕಾಡುಪ್ರಾಣಿಗಳನ್ನು ಬೇಟೆಯಾಡಿ ಕಾಂಗ್ರೆಸ್ ಶಾಸಕನ ಪುತ್ರ , ಸಹೋದರ ನೃತ್ಯ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಯುಗಾದಿ ಹಬ್ಬದ ಹಿನ್ನೆಲೆ ಮಸ್ಕಿ ಕಾಂಗ್ರೆಸ್ ಶಾಸಕ ಆರ್ ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಮೊಲಗಳನ್ನು ಬೇಟೆಯಾಡಿ ಅವುಗಳನ್ನು ಕಟ್ಟಿಗೆ ಕಟ್ಟಿಕೊಂಡು ರಸ್ತೆಯಲ್ಲಿ ನೃತ್ಯ ಮಾಡುತ್ತಾ ಮೆರವಣಿಗೆ ಮಾಡಿದ್ದಾರೆ. ಹಾಗೂ ನೂರಾರು ಜನರ ಜೊತೆ ಕೊಡಲಿ, ಆಯುಧಗಳನ್ನು ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.
ಯುಗಾದಿ ಹಬ್ಬದ ಹಿನ್ನೆಲೆ ಶಾಸಕರ ಪುತ್ರ ಹಾಗೂ ಸಹೋದರನ ತಂಡ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಗಿ ಅದನ್ನು ಕಟ್ಟಿಗೆಗೆ ಸಿಕ್ಕಿಸಿಕೊಂಡು ಮೆರವಣಿಗೆ ನಡೆಸಿದ್ದಾರೆ. ಅಲ್ಲದೇ ಮಾರಕಾಸ್ತ್ರಗಳನ್ನು ಕೂಡ ಪ್ರದರ್ಶಿಸಿದ್ದಾರೆ. ಈ ಮೂಲಕ ಶಾಸಕ ಆರ್ ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read