ರಾಯಗಢ: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲತೀರಕ್ಕೆ ತೆರಳದಂತೆ ಕಟ್ಟೆಚ್ಚರಕ್ಕೆ ಸೂಚಿಸಿದ್ದರೂ ನಿರ್ಲಕ್ಷಿಸಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ದೋಣಿ ಖಾಂಡೇರಿಯಿಂದ ಅಲಿಬಾಗ್ ಬಳಿ ತೆರಳುತ್ತಿದ್ದ ವೇಳೆ ಮುಳುಗಡೆಯಾಗಿದ್ದು, ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದಿದೆ. ದೋಣಿಯಲ್ಲಿ ೮ ಮೀನುಗಾರರು ಇದ್ದರು. ಅವರಲ್ಲಿ ಐವರು ಈಜಿ ದಡ ಸೇರಿದ್ದಾರೆ. ಆದರೆ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣ ಅತಂಡ ದೌಡಾಯಿಸಿದ್ದು, ನಾಪತ್ತೆಯಾಗಿರುವ ಮೀನುಗಾರರಿಗೆ ಶೋಧ ನಡೆಸಲಾಗುತ್ತಿದೆ. ಈಜಿ ದಡ ಸೇರಿರುವ ಐವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ