HomeBusinessಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಇನ್ನು ಕೇವಲ ಮೂರೇ ಗಂಟೆಯಲ್ಲಿ ಚೆಕ್ ಕ್ಲಿಯರೆನ್ಸ್

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಇನ್ನು ಕೇವಲ ಮೂರೇ ಗಂಟೆಯಲ್ಲಿ ಚೆಕ್ ಕ್ಲಿಯರೆನ್ಸ್

ಮುಂಬೈ: ಬ್ಯಾಂಕ್ ಗಳಲ್ಲಿ ಚೆಕ್ ಕ್ಲಿಯರೆನ್ಸ್ ಅವಧಿಯನ್ನು ಎರಡು ಮೂರು ದಿನಗಳಿಂದ ಕೇವಲ ಮೂರು ಗಂಟೆಗಳಿಗೆ ಇಳಿಸುವ ಮಹತ್ವದ ನಿರ್ಧಾರವನ್ನು ಆರ್.ಬಿ.ಐ. ಕೈಗೊಂಡಿದೆ. ಶೀಘ್ರವೇ ಈ ನೀತಿ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ದ್ವೈಮಾಸಿಕ ಸಾಲ ನೀತಿ ಪ್ರಕಟಿಸಿದ ಆರ್.ಬಿ.ಐ. ಗವರ್ನರ್ ಶಕ್ತಿ ಕಾಂತ್ ದಾಸ್ ಅವರು, ಚೆಕ್ ಕ್ಲಿಯರೆನ್ಸ್ ಸಮಯವನ್ನು ಪ್ರಸ್ತುತ ಎರಡು ಮೂರು ದಿನಗಳಿಂದ ಕೆಲವೇ ಗಂಟೆಗಳಿಗೆ ಕಡಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಚೆಕ್ ಕ್ಲಿಯರೆನ್ಸ್ ಗಾಗಿ ಮೂರ್ನಾಲ್ಕು ದಿನ ಕಾಯಬೇಕಿಲ್ಲ. ಮೂರು ಗಂಟೆಯಲ್ಲೇ ಚೆಕ್ ಕ್ಲಿಯರೆನ್ಸ್ ವ್ಯವಸ್ಥೆ ಜಾರಿಗೆ ಬರಲಿದೆ. ಈ ಬದಲಾವಣೆಯು ಚೆಕ್ ಕ್ಲಿಯರೆನ್ಸ್‌ಗೆ ತೆಗೆದುಕೊಳ್ಳುವ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಎಲೆಕ್ಟ್ರಾನಿಕ್ ಫಂಡ್‌ಗಳ ವರ್ಗಾವಣೆ(NEFT) ಮತ್ತು ರಿಯಲ್ ಟೈಮ್ ಗ್ರಾಸ್ ಸೆಟಲ್‌ಮೆಂಟ್(RTGS) ನೀಡುವ ಕ್ಷಿಪ್ರ ವರ್ಗಾವಣೆ ವೇಗಕ್ಕೆ ಹತ್ತಿರ ತರಲು ಹೊಂದಿಸಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular