HomeBusinessಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಎಲ್ಲಾ ಖಾತೆಗಳಿಗೆ ನಾಮಿನಿ ಕಡ್ಡಾಯ

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಎಲ್ಲಾ ಖಾತೆಗಳಿಗೆ ನಾಮಿನಿ ಕಡ್ಡಾಯ

ಮುಂಬೈ: ಎಲ್ಲಾ ಖಾತೆಗಳಿಗೆ ನಾಮಿನಿ ಕಡ್ಡಾಯ ಮಾಡಿರುವುದನ್ನು ಖಚಿತಪಡಿಸಿಕೊಳ್ಲುವಂತೆ ಬ್ಯಾಂಕುಗಳಿಗೆ ಆರ್‌ಬಿಐ ಸೂಚನೆ ನೀಡಿದೆ.

ಈಗಾಗಲೇ ಅಸ್ತಿತ್ವದಲ್ಲಿರುವ ಮತ್ತು ಹೊಸ ಗ್ರಾಹಕರ ಠೇವಣಿ ಖಾತೆಗಳು, ಸೇಫ್ಟಿ ಲಾಕರ್ ಗಳಿಗೆ ನಾಮಿನಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಶುಕ್ರವಾರ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.

ಠೇವಣಿದಾರರು ಮೃತರಾದ ಸಂದರ್ಭದಲ್ಲಿ ಕ್ಲೇಮ್ ಗಳನ್ನು ಬೇಗನೆ ಇತ್ಯರ್ಥಪಡಿಸಲು ಇದರಿಂದ ಅನುಕೂಲವಾಗುತ್ತದೆ. ಆರ್‌ಬಿಐ ವಿಶ್ಲೇಷಣೆಯ ಪ್ರಕಾರ ಭಾರಿ ಸಂಖ್ಯೆಯ ಠೇವಣಿ ಖಾತೆಗಳಿಗೆ ನಾಮಿನಿಗಳೇ ಇಲ್ಲ. ಇದರಿಂದ ಗ್ರಾಹಕರ ಸಾವಿನ ಸಂದರ್ಭದಲ್ಲಿ ಕುಟುಂಬದವರಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಖಾತೆಗಳಿಗೆ ನಾಮಿನಿ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular