HomeBusinessಚಿಲ್ಲರೆ ಹಣದುಬ್ಬರ ಇಳಿಕೆ ಹಿನ್ನೆಲೆ: ಆರ್‌ಬಿಐ ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಚಿಲ್ಲರೆ ಹಣದುಬ್ಬರ ಇಳಿಕೆ ಹಿನ್ನೆಲೆ: ಆರ್‌ಬಿಐ ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಚಿಲ್ಲರೆ ಹಣದುಬ್ಬರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರ್.ಬಿ.ಐ. ಬಡ್ಡಿದರವನ್ನು ಈ ತಿಂಗಳು ಶೇ. 6.5 ರಷ್ಟು ಇರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಜೂನ್ 6 ರಿಂದ 8 ರವರೆಗೆ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ಹಣಕಾಸು ನೀತಿ ಸಮಿತಿ ಸಭೆ ನಡೆಯಲಿದೆ. ಜೂನ್ 8ರಂದು ದ್ವೈಮಾಸಿಕ ವಿತ್ತ ನೀತಿ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಬಿಐ ಬಡ್ಡಿ ದರವನ್ನು ಏಪ್ರಿಲ್ ನಲ್ಲಿ ಶೇಕಡ 6.5 ರಷ್ಟು ನಿಗದಿ ಮಾಡಿತ್ತು. ಇದೀಗ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಇಳಿಕೆಯಾಗಿರುವುದರಿಂದ ಬಡ್ಡಿ ದರ ಯಥಾಸ್ಥಿತಿ ಕಾಯ್ದುಕೊಳ್ಳಬಹುದು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಗ್ರಾಹಕರ ಬೆಲೆ ಸೂಚ್ಯಂಕ 18 ತಿಂಗಳ ಕನಿಷ್ಠ ಶೇಕಡ 4.7 ಕ್ಕೆ ಇಳಿದಿತ್ತು. ಮೇ ತಿಂಗಳ ಸೂಚ್ಯಂಕ ಜೂನ್ 12ರಂದು ಪ್ರಕಟವಾಗಲಿದೆ. ಹಣದುಬ್ಬರ ಇಳಿಕೆಯಾಗಿರುವುದರಿಂದ ಆರ್.ಬಿ.ಐ. ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular