ಶಿವಮೊಗ್ಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸುವರ್ಣಾವಕಾಶ ನೀಡಿದೆ. ಆರ್‌ಬಿಐನ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ ಅಟೆಂಡೆಂಟ್(Attendant) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಮಾರ್ಚ್ 08, 2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಆರ್‌ಬಿಐನ ಅಧಿಕೃತ ವೆಬ್‌ಸೈಟ್ www.rbi.org.in ಗೆ ಭೇಟಿ ನೀಡಿ, ‘Recruitment for the post of Assistant-Panel year 2025’ ಎಂಬ ಲಿಂಕ್ ಕ್ಲಿಕ್ ಮಾಡುವ ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮುಖ್ಯ ಮಾಹಿತಿ:
- ಅರ್ಜಿ ಸಲ್ಲಿಸಲು ವೆಬ್‌ಸೈಟ್: www.rbi.org.in
- ಕೊನೆಯ ದಿನಾಂಕ: ಮಾರ್ಚ್ 08, 2026.

