HomeBusinessಸತತ 9ನೇ ತಿಂಗಳು ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಸತತ 9ನೇ ತಿಂಗಳು ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಸತತ 9ನೇ ತಿಂಗಳು ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಏರಿಕೆ. ಅಮೆರಿಕದ ಫೆಡರಲ್ ರಿಸರ್ವ್ ಏರಿಕೆ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈ ಬಾರಿಯೂ ತನ್ನ ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ.

ಕಳೆದ ಬಾರಿ ಫೆಬ್ರವರಿ 2023ರಲ್ಲಿ ಆರ್‌ಬಿಐ ಬಡ್ಡಿ ದರವನ್ನು ಶೇಕಡ 6.5ಕ್ಕೆ ನಿಗದಿ ಮಾಡಿದ್ದು, ನಂತರ ಯಾವುದೇ ಬದಲಾವಣೆ ಆಗದೆ ಅದೇ ಬಡ್ಡಿದರ ಮುಂದುವರೆಸಿಕೊಂಡು ಬಂದಿದೆ. ಇದನ್ನೇ ಕೂಡ ಈ ಬಾರಿಯೂ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 4 ರಿಂದ 6ರವರೆಗೆ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ವಿತ್ತೀಯ ನೀತಿ ಸಮಿತಿ ಸಭೆ ನಡೆಯಲಿದ್ದು, ಬಡ್ಡಿದರ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular