HomeBusinessಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ

ಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ

ನವದೆಹಲಿ: ಇಂದಿನಿಂದ ದೇಶಾದ್ಯಂತ 2000 ರೂ. ನೋಟು ಬದಲಾವಣೆಗೆ ಆರ್‌ಬಿಐ ಅವಕಾಶ ಕಲ್ಪಿಸಿದೆ. ಚಲಾವಣೆಯಿಂದ ಹಿಂದಕ್ಕೆ ಪಡೆಯಲು ನಿರ್ಧರಿಸಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಇಂದಿನಿಂದ ನಾಲ್ಕು ತಿಂಗಳ ಕಾಲ ಬ್ಯಾಂಕುಗಳಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ತಮ್ಮ ಖಾತೆಗೆ ಜಮಾ ಕೂಡ ಮಾಡಬಹುದು.

ಇದಕ್ಕಾಗಿ ಯಾವುದೇ ಫಾರ್ಮ್, ಭರ್ತಿ ಮಾಡಬೇಕಿಲ್ಲ, ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಗ್ರಾಹಕ ಸರತಿ ಸಾಲಿನಲ್ಲಿ ನಿಂತಾಗ ಗರಿಷ್ಠ 20 ಸಾವಿರ ರೂಪಾಯಿವರೆಗೆ ಮಾತ್ರ ನೋಟು ವಿನಿಮಯ ಮಾಡಿಕೊಳ್ಳಬಹುದು. ಮತ್ತೆ ಸರತಿ ಸಾಲಿನಲ್ಲಿ ನಿಂತು ಉಳಿದ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಒಬ್ಬ ವ್ಯಕ್ತಿ ಒಂದು ದಿನ ಎಷ್ಟು ಬಾರಿ ಬೇಕಾದರೂ ಸರತಿಯಲ್ಲಿ ನಿಂತು ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಆರ್.ಬಿ.ಐ. ಸ್ಪಷ್ಟನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟಂಬರ್ 30ರವರೆಗೆ ದೇಶದಾದ್ಯಂತ ಎಲ್ಲಾ ಬ್ಯಾಂಕುಗಳಲ್ಲಿ ನೋಟು ಬದಲಾವಣೆ ಅಥವಾ ಜಮೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೇರೆ ಬ್ಯಾಂಕಿಗೆ ಹೋಗಿ ಒಂದು ಸಲಕ್ಕೆ ಗರಿಷ್ಟ 20 ಸಾವಿರ ರೂಪಾಯಿ ಮೌಲ್ಯದ 2000 ರೂ. ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular