HomeBusinessಸಾಲಗಾರರಿಗೆ ಸಿಹಿ ಸುದ್ದಿ: ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಿನ್ನೆಲೆ ಏಪ್ರಿಲ್...

ಸಾಲಗಾರರಿಗೆ ಸಿಹಿ ಸುದ್ದಿ: ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಿನ್ನೆಲೆ ಏಪ್ರಿಲ್ ನಲ್ಲಿ ಮತ್ತೆ ಬಡ್ಡಿ ದರ ಇಳಿಕೆ

ನವದೆಹಲಿ: ಫೆಬ್ರವರಿ ಅವಧಿಯ ಚಿಲ್ಲರೆ ಹಣದುಬ್ಬರ 7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಸುತ್ತಿನ ಬಡ್ಡಿ ದರ ಇಳಿಕೆ ಮಾಡುವ ನಿರೀಕ್ಷೆ ಮೂಡಿಸಿದೆ.

ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇಕಡ 3.61 ರಷ್ಟು ದಾಖಲಾಗಿದೆ. ಇದು ಬಡ್ಡಿ ದರ ನಿಗದಿಗೆ RBI ಪರಿಗಣಿಸುವ ಗರಿಷ್ಠ ಮಾನದಂಡಕ್ಕಿಂತಲೂ ಕಡಿಮೆಯಾಗಿದೆ. ಏಪ್ರಿಲ್ 9ರಂದು ನಡೆಯಲಿರುವ RBI ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶ ಸಭೆಯಲ್ಲಿ ರೆಪೊ ದರವನ್ನು ಶೇಕಡ 0.25 ರಷ್ಟು ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಹಣಕಾಸು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರೆಪೊ ದರ ಇಳಿಕೆಯಾದಲ್ಲಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಲಿವೆ. ಇದರಿಂದ ಸಾಲಗಾರರಿಗೆ ಹೊರೆ ಕಡಿಮೆಯಾಗಲಿದೆ. ಪ್ರಸ್ತುತ ರೆಪೊ ದರ ಶೇಕಡ 6.25ರಷ್ಟು ಇದ್ದು, ಕಳೆದ ತಿಂಗಳು ಶೇಕಡ 0.25 ರಷ್ಟು ಇಳಿಕೆ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular