BREAKING: RBI ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಇರುವ 100 ರೂ., 200 ರೂ. ಹೊಸ ನೋಟು ಬಿಡುಗಡೆ: ಹಳೆ ನೋಟೂ ಮುಂದುವರಿಕೆ

ಮುಂಬೈ: ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಹೊಂದಿರುವ 100 ಮತ್ತು 200 ರೂ. ನೋಟುಗಳನ್ನು ಬಿಡುಗಡೆ ಮಾಡಲಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಹೊಂದಿರುವ 100 ಮತ್ತು 200 ರೂ. ಮುಖಬೆಲೆಯ ನೋಟುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಈ ನೋಟುಗಳ ವಿನ್ಯಾಸವು ಮಹಾತ್ಮ ಗಾಂಧಿ (ಹೊಸ) ಸರಣಿಯ 100 ಮತ್ತು 200 ರೂ. ನೋಟುಗಳಿಗೆ ಎಲ್ಲಾ ರೀತಿಯಲ್ಲೂ ಹೋಲುತ್ತದೆ ಎಂದು ತಿಳಿಸಿದೆ.

ರಿಸರ್ವ್ ಬ್ಯಾಂಕ್ ಹಿಂದೆ ಬಿಡುಗಡೆ ಮಾಡಿದ 100 ಮತ್ತು 200 ರೂ. ಮುಖಬೆಲೆಯ ಎಲ್ಲಾ ನೋಟುಗಳು ಕಾನೂನುಬದ್ಧವಾಗಿ ಉಳಿಯುತ್ತವೆ.

ಮಲ್ಹೋತ್ರಾ ಡಿಸೆಂಬರ್ 2024 ರಲ್ಲಿ ಆರ್‌ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡರು,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read