HomeLatest Newsರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದಿರಿಸಿದ RBI: ಶೇ.5.25ರಲ್ಲಿ ಮುಂದುವರಿಕೆ

ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದಿರಿಸಿದ RBI: ಶೇ.5.25ರಲ್ಲಿ ಮುಂದುವರಿಕೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ ನಿರೀಕ್ಷೆಯಂತೆ ರಿಪೋ ದರವನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಆರ್​ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದರೊಂದಿಗೆ ಆರ್​ಬಿಐನ ರಿಪೋ ದರ ಅಥವಾ ಬಡ್ಡಿದರವು ಶೇ. 5.25ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂಪಿಸಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಸುದ್ದಿಗೋಷ್ಠಿಯಲ್ಲಿ ಈ ವಿಶ್ಜಯ ತಿಳಿಸಿದ್ದಾರೆ. 2026-27ರ ವರ್ಷಕ್ಕೆ ಜಿಡಿಪಿ ಬೆಳವಣಿಗೆ ಮತ್ತು ಹಣದುಬ್ಬರ ಎಷ್ಟಾಗಬಹುದು ಎಂದು ಮಾಡಲಾಗಿರುವ ಅಂದಾಜನ್ನೂ ಬಹಿರಂಗಪಡಿಸಿದರು.

ಈ ಹಣಕಾಸು ವರ್ಷದಲ್ಲಿ (2026-27) ಹಣದುಬ್ಬರ ಶೇ. 4.6 ಇರಬಹುದು ಎಂದು ಆರ್​ಬಿಐ ಪ್ರೊಜೆಕ್ಟ್ ಮಾಡಿದೆ. ಮೊದಲ ಕ್ವಾರ್ಟರ್​ನಲ್ಲಿ ಶೇ. 4, ಎರಡನೇ ಕ್ವಾರ್ಟರ್​ನಲ್ಲಿ ಶೇ. 4.4, ಮೂರನೇ ಕ್ವಾರ್ಟರ್​ನಲ್ಲಿ ಶೇ. 5.2, ನಾಲ್ಕನೇ ಕ್ವಾರ್ಟರ್​ನಲ್ಲಿ ಶೇ. 4.7ರಷ್ಟು ಹಣದುಬ್ಬರ ಇರಬಹುದು ಎನ್ನುವುದು ಆರ್​ಬಿಐ ಎಂಪಿಸಿಯಲ್ಲಿ ಬಂದಿರುವ ಅಭಿಪ್ರಾಯ.

2026-27ರಲ್ಲಿ ಈ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಸರಾಸರಿಯಾಗಿ ಶೇ. 6.9 ಜಿಡಿಪಿ ಬೆಳೆಯಬಹುದು ಎಂದು ಆರ್​ಬಿಐ ಈ ಬಾರಿ ಅಂದಾಜು ಮಾಡಿದೆ. ಮೊದಲ ಕ್ವಾರ್ಟರ್​ನಲ್ಲಿ (2026ರ ಏಪ್ರಿಲ್​ನಿಂದ ಜೂನ್) ಶೇ. 6.8, ಎರಡನೇ ಕ್ವಾರ್ಟರ್​ನಲ್ಲಿ ಶೇ. 6.7, ಮೂರನೇ ಕ್ವಾರ್ಟರ್​ನಲ್ಲಿ ಶೇ. 7 ಮತ್ತು ನಾಲ್ಕನೇ ಕ್ವಾರ್ಟರ್​ನಲ್ಲಿ ಶೇ. 7.2ರಷ್ಟು ಆರ್ಥಿಕತೆ ಬೆಳೆಯಬಹುದು ಎಂದು ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ವಿಚಾರವಾಗಿ ಪ್ರಸಕ್ತ ವರ್ಷದ ಆರ್ಥಿಕ ಬೆಳವಣಿಗೆಯ ಮೇಲೆ ಈ ಬಿಕ್ಕಟ್ಟು ಪರಿಣಾಮ ಬೀರುವ ಸಾಧ್ಯತೆಯನ್ನು ವಿವರಿಸಿದರು. ಬಿಕ್ಕಟ್ಟಿನಿಂದ ವಿವಿಧ ಕ್ಷೇತ್ರಗಳನ್ನು ರಕ್ಷಿಸಲು ಸರ್ಕಾರ ತೆಗೆದುಕೊಂಡಿರುವ, ತೆಗೆದುಕೊಳ್ಳುತ್ತಿರುವ ವಿವಿಧ ಕ್ರಮಗಳನ್ನು ಅವರು ಸ್ವಾಗತಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular