BREAKING : ಬೆಂಗಳೂರಲ್ಲಿ ‘ಕಾಲ್ತುಳಿತ ದುರಂತ’ : ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಘೋಷಿಸಿದ ‘RCB’.!

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 80 ದಿನಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಒಂದನ್ನು ಹಂಚಿಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ (RCB) ಭಾವುಕ ಪೋಸ್ಟ್ ಹಂಚಿಕೊಂಡಿದೆ. ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.

ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್ಸಿಬಿ ಪ್ರತಿ ಕುಟುಂಬಕ್ಕೆ ತಲಾ ₹25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.

ಇದು ಆರ್ಸಿಬಿ ಕೇರ್ಸ್ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ.
ಆರ್ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ… ಎಂದು ಟ್ವೀಟ್ ಮಾಡಿದೆ.

ಆಗಸ್ಟ್ 27 ರಂದು ಪೋಸ್ಟ್ ಮಾಡಿದ ಆರ್’ಸಿಬಿ (RCB)

ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ.ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ.

ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ.

ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.ಅದರ ಫಲವೇ ಆರ್ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.
ಇಂದು ನಾವು ಮರಳಿದ್ದೇವೆ; ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ. ಎಂದು ಪೋಸ್ಟ್ ಮಾಡಿತ್ತು.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read