ಬೆಂಗಳೂರು: ಐಪಿಎಲ್ ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಟ ಮಾಡುತ್ತಿದ್ದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್ ಮ್ಯಾಚ್ ಗಳ ಟಿಕೆಟ್ ಸಿಕ್ಕರೆ ಸಾಕು ಎಂದು ಕ್ರಿಕೆಟ್ ಪ್ರೇಮಿಗಳು ಕಾಯುತ್ತಿರುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಬ್ಲಾಕ್ ನಲ್ಲಿ ದುಪ್ಪಟ್ಟು ಹಣಕ್ಕೆ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ.
ಆರ್ ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದ ಟಿಕೆಟ್ ನ್ನು ಹೆಚ್ಚಿನ ಬೆಲೆಗೆ ಬ್ಲಾಕ್ ನಲ್ಲಿ ಮಾರಾಟ ಮಾಡುತ್ತಿದ್ದ 8 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಹಾಗೂ ಕಬ್ಬನ್ ಪಾರ್ಕ್ ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದರು.
ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ನೇತೃತ್ವದಲ್ಲಿ ಮಫ್ತಿಯಲ್ಲಿ ದಾಳಿ ನಡೆಸಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚಾರಣೆ ನಡೆಸಿ, 8 ಆರೋಪಿಗಳನ್ನು ಬಂಧಿಸಲಾಗಿದೆ.