BIG NEWS: ‘RCB’ಗೆ ಈಶ್ವರಪ್ಪ, ಯತ್ನಾಳ್ ಸಾರಥ್ಯ: ಅ. 20ರಂದು ‘ರಾಯಣ್ಣ, ಚೆನ್ನಮ್ಮ ಬ್ರಿಗೇಡ್’ ಘೋಷಣೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಸಂಘಟನೆ ಆರಂಭಿಸಲಿದ್ದಾರೆ.

ರಾಯಣ್ಣ ಚೆನ್ನಮ್ಮ ಬ್ರಿಗೇಡ್(RCB) ಸಂಘಟನೆಯನ್ನು ಆರಂಭಿಸಿ ಕುರುಬ ಸಮುದಾಯ, ಪಂಚಮಸಾಲಿ ಸಮಾಜಗಳನ್ನು ಒಗ್ಗೂಡಿಸಲು ಪ್ಲಾನ್ ಮಾಡಿಕೊಂಡಿದ್ದಾರೆ. ಅಕ್ಟೋಬರ್ 20ರಂದು ಆರ್ಸಿಬಿ ಘೋಷಣೆಯಾಗುವ ಸಾಧ್ಯತೆ ಇದೆ.

ಈ ಹಿಂದೆ ಕೆ.ಎಸ್. ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಸಂಘಟನೆ ಮಾಡಿದ್ದರು. ಇದೀಗ ಹೊಸ ರೂಪ, ಹೊಸ ಹೆಸರಿನೊಂದಿಗೆ ರಾಜ್ಯಮಟ್ಟದಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸಲು ಮುಂದಾಗಿದ್ದಾರೆ. ಅವರಿಗೆ ಉತ್ತರ ಕರ್ನಾಟಕದ ಬಹುಸಂಖ್ಯಾತ ಪಂಚಮಸಾಲಿ ಸಮುದಾಯ ಜೊತೆಯಾಗಿದ್ದು, ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಹೆಸರಿನಲ್ಲಿ ಸಂಘಟನೆ ಆರಂಭಿಸಲು ಸಭೆ ನಡೆಸಿ ಚರ್ಚಿಸಲಾಗಿದೆ.

ಅ. 20ರಂದು ಈ ಬಗ್ಗೆ ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಈಶ್ವರಪ್ಪ ಅವರು ರಾಯಣ್ಣ ಬ್ರಿಗೇಡ್ ಸಂಘಟನೆ ಪ್ರಯತ್ನ ನಡೆಸಿದ್ದಾರೆ. ಅವರಿಗೆ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಪಾಟೀಲ್ ಯತ್ನಾಳ್ ಜೊತೆಯಾಗಿದ್ದು, ಹೊಸ ಸಂಘಟನೆ ಆರಂಭಿಸಲು ಮುಂದಾಗಿದ್ದಾರೆ. ಮುಂದಿನ ತಿಂಗಳು ಈ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read