HomeSportsಅಭಿಮಾನಿಗಳಿಗೆ ಶಾಕ್ ನೀಡಿದ ಆರ್‌ಸಿಬಿ ಆಡಳಿತ ಮಂಡಳಿ?

ಅಭಿಮಾನಿಗಳಿಗೆ ಶಾಕ್ ನೀಡಿದ ಆರ್‌ಸಿಬಿ ಆಡಳಿತ ಮಂಡಳಿ?

ಅಭಿಮಾನಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿ ಶಾಕ್ ನೀಡಲು ಹೊರಟಿದೆ. ತವರು ನೆಲದಲ್ಲಿ ನೆಚ್ಚಿನ ತಂಡದ ಪಂದ್ಯಗಳನ್ನು ವೀಕ್ಷಣೆ ಮಾಡುವ ಅಭಿಮಾನಿಗಳ ಕನಸಿಗೆ ತಣ್ಣೀರು ಸುರಿದಿದೆ.

ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿ ಬೆಂಗಳೂರು ನಗರದಲ್ಲಿ ಐಪಿಎಲ್‌ನ ಪಂದ್ಯಗಳನ್ನು ನಡೆಸಲು ಆಸಕ್ತಿ ತೋರುತ್ತಿಲ್ಲ. ಕೆಎಸ್‌ಸಿಎ, ಸರ್ಕಾರ ಒಪ್ಪಿಗೆ ನೀಡಿದರೂ ಸಹ ಆಡಳಿತ ಮಂಡಳಿ ಈ ವಿಚಾರದಲ್ಲಿ ಹಿಂದೇಟು ಹಾಕಿತ್ತಿದೆ.

2025ರ ಜೂನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಗೆದ್ದ ಬಳಿಕ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿತ್ತು. ಇದರಲ್ಲಿ 11 ಜನರು ಸಾವನ್ನಪ್ಪಿದ್ದರು. ಬಳಿಕ ಬೆಂಗಳೂರಿನಲ್ಲಿ ಯಾವುದೇ ಪಂದ್ಯ ನಡೆದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2026ರ ಐಪಿಎಲ್ ಪಂದ್ಯಾವಳಿಯನ್ನು ಬೆಂಗಳೂರು ನಗರದಲ್ಲಿ ನಡೆಸಲಾಗುತ್ತದೆ ಎಂದು ಕೆಎಸ್‌ಸಿಎ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಆರ್‌ಸಿಬಿ ಆಡಳಿತ ಮಂಡಳಿಯೇ ಒಪ್ಪಿಗೆ ನೀಡುತ್ತಿಲ್ಲ. ಪಂದ್ಯವನ್ನು ಮುಂಬೈ ಅಥವ ರಾಯ್‌ಪುರಕ್ಕೆ ಸ್ಥಳಾಂತರ ಮಾಡಲು ಚಿಂತನೆ ನಡೆಸಿದೆ.

ಸರ್ಕಾರ, ಬೆಂಗಳೂರು ಪೊಲೀಸರಿಂದ ಅನುಮತಿ ಕೊಡಿಸುತ್ತೇವೆ. ಬೆಂಗಳೂರಿನಲ್ಲಿಯೇ ಪಂದ್ಯಗಳನ್ನು ನಡೆಸೋಣ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ್ ತಂಡಕ್ಕೆ ಭರವಸೆ ನೀಡಿದ್ದಾರೆ. ಆದರೆ ಆರ್‌ಸಿಬಿ ಉಪಾಧ್ಯಕ್ಷ ರಾಜೇಶ್‌ ಮೆನನ್ ಇದಕ್ಕೆ ಇನ್ನೂ ಒಪ್ಪಿಗೆ ನೀಡಿಲ್ಲ.

ಕಳೆದ ತಿಂಗಳು ವಿರಾಟ್ ಕೊಹ್ಲಿ ಆಡಿದ್ದ ವಿಜಯ್ ಹಜಾರೆ ಟ್ರೋಫಿಯನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಸಲು ಅನುಮತಿ ನೀಡಿರಲಿಲ್ಲ. ಆದ್ದರಿಂದ ಕೊಹ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಈಗ ಐಪಿಎಸ್ ಪಂದ್ಯಗಳು ಸಹ ಶಿಫ್ಟ್ ಆಗುವ ಸಾಧ್ಯತೆ ಇದೆ.

ಕಳೆದ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವ ಕಾರಣ ಈ ಬಾರಿಯ ಐಪಿಎಲ್‌ನ ಉದ್ಘಾಟನಾ ಪಂದ್ಯವನ್ನು ಆರ್‌ಸಿಬಿ ಆಡಬೇಕಿದೆ. ಈ ವರ್ಷವೂ ತಂಡ ಕಪ್ ಗೆಲ್ಲಬೇಕು ಎಂದು ಅಭಿಮಾನಿಗಳು ಬಯಸಿದ್ದಾರೆ.

ಐಪಿಎಲ್ ಟೂರ್ನಿಯ 19ನೇ ಆವೃತ್ತಿಯು ಮಾರ್ಚ್‌ 26ರಿಂದ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉದ್ಘಾಟನಾ ಪಂದ್ಯವನ್ನು ಮುಂಬೈನಲ್ಲಿ ಆಡಲು ಬಯಸಿದ್ದು, ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ.

ಕೆಲವು ದಿನಗಳ ಹಿಂದೆ ಆರ್‌ಸಿಬಿ ತಂಡದ ಆಡಳಿತ ಮಂಡಳಿ ಪುಣೆ, ರಾಯ್‌ಪುರ ಮೈದಾನವನ್ನು ಪರಿಶೀಲನೆ ಮಾಡಿತ್ತು. ಮುಂಬೈ ಅಥವ ರಾಯ್‌ಪುರದಲ್ಲಿ ಪಂದ್ಯಗಳನ್ನು ಆಯೋಜಿಸಲು ತಂಡ ಬಯಸಿದೆ.

ಬುಧವಾರ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಅವರನ್ನು ಆರ್‌ಸಿಬಿ ತಂಡದ ಆಡಳಿತ ಮಂಡಳಿ ಭೇಟಿ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಪೋಸ್ಟ್ ಹಾಕಿದ್ದಾರೆ.

ಎರಡು ಪಂದ್ಯಗಳನ್ನು ರಾಯ್‌ಪುರ್‌ನಲ್ಲಿ, ಉಳಿದ 5 ಪಂದ್ಯಗಳನ್ನು ಮುಂಬೈನಲ್ಲಿ ಆರ್‌ಸಿಬಿ ಆಡಲಿದೆ ಎಂದು ಮುಂಬೈನ ಕೆಲವು ವೆಬ್‌ಸೈಟ್‌ಗಳು ವರದಿಯನ್ನು ಸಹ ಪ್ರಕಟಿಸಿವೆ. ಆದ್ದರಿಂದ ತವರು ನೆಲದಲ್ಲಿ ಈ ವರ್ಷ ಆರ್‌ಸಿಬಿಯ 7 ಪಂದ್ಯ ನಡೆಯುವುದಿಲ್ಲ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆ ಮಾಡಲು ಅನುಮತಿ ಕೊಡಲು ಕರ್ನಾಟಕ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ. ಕೆಎಸ್‌ಸಿಎ ಈ ಸಮಿತಿಯ ಜೊತೆ ಮಾತುಕತೆ ನಡೆಸುತ್ತಿದ್ದು, ಪಂದ್ಯ ಆಯೋಜನೆ ಮಾಡಲು ಅನುಮಿತಿ ಪಡೆಯಲು ಪ್ರಯತ್ನವನ್ನು ನಡೆಸುತ್ತಿದೆ.

ಸರ್ಕಾರ ಮತ್ತು ಸಮಿತಿ ಒಪ್ಪಿಗೆ ನೀಡಿದರೂ ಸಹ ಆರ್‌ಸಿಬಿಯೇ ತವರು ನೆಲದಲ್ಲಿ ಪಂದ್ಯ ಆಡುವುದು ಅನುಮಾನ ಎಂಬ ಸುದ್ದಿಗಳಿವೆ. ಈ ಕುರಿತು ಅಂತಿಮ ತೀರ್ಮಾನ ಇನ್ನಷ್ಟೇ ಹೊರಬರಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular