HomeLatest NewsRCB ಭರ್ಜರಿ ಜಯ: ಟ್ವೀಟ್ ಮೂಲಕ ಅಭಿನಂದಿಸಿದ ವಿಜಯ್ ಮಲ್ಯ

RCB ಭರ್ಜರಿ ಜಯ: ಟ್ವೀಟ್ ಮೂಲಕ ಅಭಿನಂದಿಸಿದ ವಿಜಯ್ ಮಲ್ಯ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ಬರೆದಿದೆ. ನಿನ್ನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ, ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬೆಂಗಳೂರು ತಂಡದ ಈ ಐತಿಹಾಸಿಕ ಜಯಭೇರಿಗೆ ದೇಶಾದ್ಯಂತ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದ್ದು, ಆರ್‌ಸಿಬಿ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಕೂಡ ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟ್ ಹಾಕುವ ಮೂಲಕ ತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

“ನಮ್ಮ ಸಿಂಹಗಳು ಜೋರಾಗಿ ಘರ್ಜಿಸಿವೆ

ವಿಜಯೋತ್ಸವದ ಬೆನ್ನಲ್ಲೇ ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಜಯ್ ಮಲ್ಯ, ಆರ್‌ಸಿಬಿ ತಂಡದ ಸಾಧನೆಯನ್ನು ಹಾಡಿ ಹೊಗಳಿದ್ದಾರೆ.

“ಆರ್‌ಸಿಬಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಸತತ ಎರಡು ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಅದ್ಭುತ ಸಾಧನೆ ಮಾಡಿದ್ದೀರಿ. ನಮ್ಮ ದೊಡ್ಡ ಸಿಂಹಗಳೇ… ಮೈದಾನದಲ್ಲಿ ಜೋರಾಗಿ ಘರ್ಜಿಸುವ ಮೂಲಕ ನೀವೆಲ್ಲರೂ ಹೆಮ್ಮೆಪಡುವಂತೆ ಮಾಡಿದ್ದೀರಿ” ಎಂದು ವಿಜಯ್ ಮಲ್ಯ ಭಾವುಕರಾಗಿ ಬರೆದುಕೊಂಡಿದ್ದಾರೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಲ್ಯ ಅವರ ಈ ಟ್ವೀಟ್ ಸಖತ್ ವೈರಲ್ ಆಗುತ್ತಿದ್ದು, ಆರ್‌ಸಿಬಿ ಅಭಿಮಾನಿಗಳು ಕಮೆಂಟ್‌ಗಳ ಮೂಲಕ ತಮ್ಮ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಸತತ ಎರಡನೇ ಬಾರಿ ಕಪ್ ಗೆದ್ದು ಬೀಗುತ್ತಿರುವ ಬೆಂಗಳೂರು ತಂಡದ ವಿಜಯಯಾತ್ರೆಗೆ ಇಡೀ ಕರ್ನಾಟಕವೇ ಹೆಮ್ಮೆ ಪಡುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular