HomeLatest Newsಪಂಜಾಬ್ ಮಣಿಸಿ IPL ಫೈನಲ್ ಪ್ರವೇಶಕ್ಕೆ RCB ಸಜ್ಜು

ಪಂಜಾಬ್ ಮಣಿಸಿ IPL ಫೈನಲ್ ಪ್ರವೇಶಕ್ಕೆ RCB ಸಜ್ಜು

ಚಂಡೀಗಢ: ಮುಲ್ಲನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ರಾತ್ರಿ 7.30 ಕ್ಕೆ ಐಪಿಎಲ್ 18 ನೇ ಆವೃತ್ತಿಯ ಮೊದಲ ಕ್ವಾಲಿಫೈಯರ್ಸ್ ಹಣಾಹಣಿ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಉಭಯ ತಂಡಗಳು ನೇರವಾಗಿ ಫೈನಲ್ ಪ್ರವೇಶಿಸುವ ಗುರಿ ಹೊಂದಿವೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದ್ದು, ಸೋಲುವ ತಂಡಕ್ಕೆ ಇನ್ನೊಂದು ಅವಕಾಶ ಇದೆ.

ನಾಯಕತ್ವ ವಹಿಸಿಕೊಂಡ ಮೊದಲ ಟೂರ್ನಿಯಲ್ಲೇ ತಂಡವನ್ನು ಪ್ಲೇಆಫ್ ಹಂತಕ್ಕೆ ಮುನ್ನಡೆಸಿರುವ ರಜತ್ ಪಾಟೀದಾರ್ ಸಾರಥ್ಯದ ಆರ್‌ಸಿಬಿ ತಂಡ ಪಂಜಾಬ್ ತಂಡದ ಕಠಿಣ ಸವಾಲನ್ನು ಎದುರಿಸಲು ಕಾರ್ಯತಂತ್ರ ರೂಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ವಾಲಿಫೈಯರ್ಸ್ 1ರಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗದಿದ್ದಲ್ಲಿ ಫೈನಲ್ ಪ್ರವೇಶಿಸಲು ಇನ್ನೊಂದು ಅವಕಾಶವಿದೆ. ಆದರೆ ಮೊದಲ ಯತ್ನದಲ್ಲೇ ಪ್ರಶಸ್ತಿ ಸುತ್ತು ತಲುಪಲು ಉಭಯ ತಂಡಗಳು ತಂತ್ರ ರೂಪಿಸಿವೆ.

ಪ್ರಸಕ್ತ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ತವರಿನಾಚೆಯ ಎಲ್ಲಾ ಪಂದ್ಯಗಳನ್ನು ಜಯಿಸುವ ಮೂಲಕ ದಾಖಲೆ ಬರೆದಿದೆ. ತಂಡದ ಆತ್ಮಸ್ಥೈರ್ಯವನ್ನು ವೃದ್ಧಿಸಿಕೊಂಡಿದೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. 2016ರ ನಂತರ ಆರ್‌ಸಿಬಿ ಅಂಕಪಟ್ಟಿಯ ಅಗ್ರ ಎರಡರಲ್ಲಿ ಸ್ಥಾನ ಪಡೆದಿದೆ. ಒಟ್ಟು 35 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಪಂಜಾಬ್ 18 ಸಲ, ಬೆಂಗಳೂರು 17 ಸಲ ಜಯಗಳಿಸಿವೆ. ಪಂದ್ಯಕ್ಕೆ ಮಳೆ ಅಡ್ಡಿಯಾದಲ್ಲಿ ಕನಿಷ್ಠ ಪಕ್ಷ ತಲಾ 5 ಓವರ್ ಗಳ ಪಂದ್ಯ ಆಡಿಸಲಾಗುವುದು. ಇದರಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ. ಐದು ಓವರ್ ಗಳ ಪಂದ್ಯ ಕೂಡ ನಡೆಯದಿದ್ದರೆ ಲೀಗ್ ಹಂತದ ಅಂತ್ಯಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿರುವ ತಂಡ ಪಂಜಾಬ್ ಕಿಂಗ್ಸ್ ಫೈನಲ್ ಗೆ ಮುನ್ನಡೆಯಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular