ಬಿಗಿ ಭದ್ರತೆ ನಡುವೆಯೂ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಪಾದ ಮುಟ್ಟಿದ ಅಭಿಮಾನಿ: ವಿಡಿಯೋ ವೈರಲ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆರಗಿದ್ದಾನೆ.

ಪಂಜಾಬ್ ಕಿಂಗ್ಸ್ ವಿರುದ್ಧ ಆರ್.ಸಿ.ಬಿ. ಚೇಸ್ ಮಾಡಲು ಸಜ್ಜಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬರು ಸ್ಟಾರ್ ಬ್ಯಾಟರ್‌ನ ಪಾದಗಳನ್ನು ಮುಟ್ಟಲು ಚಿನ್ನಸ್ವಾಮಿ ಕ್ರೀಡಾಂಗಣದ ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ.

ಕೊಹ್ಲಿ ಬ್ಯಾಟಿಂಗ್ ಮಾಡಲು ಸಜ್ಜಾಗುತ್ತಿದ್ದರು. ಅಭಿಮಾನಿಯ ಅನಿರೀಕ್ಷಿತ ನಡೆ ಆತಂಕಕ್ಕೆ ಕಾರಣವಾಗಿತ್ತು. ಮೈದಾನಕ್ಕೆ ನುಗ್ಗಿದ ಅಭಿಮಾನಿ ಕೊಹ್ಲಿ ಪಾದಗಳನ್ನು ಮುಟ್ಟಲು ಮುಂದಾಗಿದ್ದು, ಅಭಿಮಾನಿಯನ್ನು ಕರೆದೊಯ್ಯಲು ಸೆಕ್ಯುರಿಟಿ ಓಡಿಹೋದಾಗ ತಬ್ಬಿಕೊಂಡಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನೆರೆದಿದ್ದ ಅಭಿಮಾನಿಯೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಯನ್ನು ಭೇಟಿ ಮಾಡಲು ಅಭಿಮಾನಿಯೊಬ್ಬರು ಭದ್ರತೆಯನ್ನು ಉಲ್ಲಂಘಿಸಿದ್ದಾರೆ. ಅಭಿಮಾನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

https://twitter.com/VathanBallal/status/1772292196441444369

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read