HomeAgricultureರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಕೇಂದ್ರ ಪ್ರಾರಂಭ

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಕೇಂದ್ರ ಪ್ರಾರಂಭ

ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 8,343 ರೂ. ರಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ರಾಯಚೂರು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ತಿಳಿಸಿದ್ದಾರೆ.

ದಿನಾಂಕ: 01-10-2026 ರಿಂದ ರೈತರ ನೊಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಂಧ ರಾಯಚೂರು ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಣಸಿಹಾಳಹುಡಾ ರಾಯಚೂರು. ಮೊ.ನಂ. 9743695467ಗೆ ಸಂಪರ್ಕ ಮಾಡಬಹುದಾಗಿದೆ.

ದೇವದುರ್ಗ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲಹಳ್ಳಿ. ಮೊ.ನಂ. 7899312989ಗೆ ಸಂಪರ್ಕ ಮಾಡಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಂಗಸುಗೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮಟ್ಟೂರು ಮೊ.ನಂ. 7022551299 ಹಾಗೂ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಲಿಂಗಸುಗೂರು. ಮೊ.ನಂ 8792668442ಗೆ ಸಂಪರ್ಕ ಮಾಡಬಹುದಾಗಿದೆ.

ಸಿಂಧನೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜವಳಗೇರಾ ಮೊ.ನಂ: 9964315868, ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಡಾ ಮೊ.ನಂ: 9964315868 ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಪಗಡದಿನ್ನಿ ಮೊ.ನಂ: 9945738297ಗೆ ಸಂಪರ್ಕ ಮಾಡಬಹುದಾಗಿದೆ.

ಮಾನವಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ತೋರಣದಿನ್ನಿ ಮೊ.ನಂ: 9902387316ಗೆ ಸಂಪರ್ಕ ಮಾಡಬಹುದಾಗಿದೆ.

ಸಿರವಾರ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಸಿರವಾರ ಮೊ.ನಂ: 9880891919ಗೆ ಸಂಪರ್ಕ ಮಾಡಬಹುದಾಗಿದೆ.

ಮಸ್ಕಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲವಡಿಗಿ ಮೊ.ನಂ: 8073325424ಗೆ ಸಂಪರ್ಕ ಮಾಡಬಹುದಾಗಿದೆ.

ಈ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳಲು ಜಿಲ್ಲೆಯ ರೈತ ಬಾಂಧವರಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆ

ರಾಯಚೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆಯನ್ನು 15 ರಿಂದ 29 ವರ್ಷದೊಳಗಿನವರಿಗೆ ಅಕ್ಟೋಬರ್ 30ರ ಬೆಳಿಗ್ಗೆ 9ಗಂಟೆಗೆ ನಗರದ ವೇದಾಂತ ಡಿಗ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಹಾಗೂ ಸಂಘ-ಸಂಸ್ಥೆಗಳು, ಯುವಕ/ಯುವತಿ ಮಂಡಳಿಗಳು ಇನ್ನಿತರೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಅವರು ತಿಳಿಸಿದ್ದಾರೆ.

ನಿಗದಿಪಡಿಸಿದ ದಿನಾಂಕ ಹಾಗೂ ಸ್ಥಳದಂದು ಬೆಳಿಗ್ಗೆ 9 ಗಂಟೆಯ ಒಳಗಾಗಿ ಸ್ಪರ್ಧಾಳುಗಳು ತಮ್ಮ ಹೆಸರನ್ನು ನೋಂದಾಯಿಸಕೊಳ್ಳತಕ್ಕದ್ದು, ವಯಸ್ಸಿನ ದೃಢೀಕರಣಕ್ಕೆ ಆಧಾರ್ ಕಾರ್ಡ್, ಗುರುತಿನ ಚೀಟಿ ಅಥವಾ ಜನ್ಮ ದಿನಾಂಕ ಇರುವ ಸರ್ಕಾರಿ ಪ್ರಮಾಣಪತ್ರವನ್ನು ಹಾಗೂ ಸ್ವಯಂ ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸುವುದು.

ಸಾಂಸ್ಕೃತಿಕ ಸ್ಪರ್ಧೆಗಳ ವಿವರ: ಜನಪದನೃತ್ಯ ತಂಡದಲ್ಲಿ 7+3 ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, 5 ರಿಂದ 8 ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ.

ಜನಪದ ಗೀತೆ ತಂಡದಲ್ಲಿ 7+3 ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, 5 ರಿಂದ 8 ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ. ಕವಿತೆ ಬರೆಯುವುದು (ಪ್ರಾದೇಶಿಕಭಾಷೆ/ಹಿಂದಿ/ಆಂಗ್ಲ) ಒಬ್ಬರು ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, 1 ಗಂಟೆ 30 ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ.

ನುಕ್ಕಾಡ್ ನಾಟಕ 10 ಜನ ಭಾಗವಹಿಸುವರ ಸಂಖ್ಯೆಯನ್ನು ಮಿತಿಗೊಳಿಸಲಾಗಿದ್ದು, ಯಾವುದೇ ಸಮಯವನ್ನು ನಿಗದಿಪಡಿಸಿರುವುದಿಲ್ಲ. ಚಿತ್ರಕಲೆ (ವೈಯಕ್ತಿಕ) 6 ಗಂಟೆ ನಿಮಿಷಕ್ಕೆ ಅವಧಿಯನ್ನು ನಿಗದಿಪಡಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular